ಕೋವಿಡ್-19 (ಕೊರೊನಾ ವೈರಸ್) ಮಾಹಿತಿ ಕನ್ನಡದಲ್ಲಿ
ಕೋವಿಡ್-19 (ಕೊರೊನಾವೈರಸ್) ಹರಡುವುದನ್ನು ತಡೆಯಲು:
ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆಯಿರಿ. ಸೋಪ್ ಮತ್ತು ನೀರು, ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ರಬ್ ಬಳಸಿ.
ಕೆಮ್ಮು ಅಥವಾ ಸೀನುವ ಯಾರಿಂದಲೂ ಸುರಕ್ಷಿತ ದೂರವನ್ನು ಕಾಪಾಡಿಕೊಳ್ಳಿ.
ನಿಮ್ಮ ಕಣ್ಣು, ಮೂಗು ಅಥವಾ ಬಾಯಿಯನ್ನು ಮುಟ್ಟಬೇಡಿ.
ನೀವು ಕೆಮ್ಮುವಾಗ ಅಥವಾ ಸೀನುವಾಗ ಮೂಗು ಮತ್ತು ಬಾಯಿಯನ್ನು ನಿಮ್ಮ ಬಾಗಿದ ಮೊಣಕೈ, ಟಿಶ್ಯೂ ಪೇಪರ್ ಅಥವಾ ಕರವಸ್ತ್ರದಿಂದ ಮುಚ್ಚಿ.
ನಿಮಗೆ ಅನಾರೋಗ್ಯ ಅನಿಸಿದರೆ ಮನೆಯಲ್ಲೇ ಇರಿ.
ನಿಮಗೆ ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ಇದ್ದರೆ, ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಮುಂಚಿತವಾಗಿ ಕರೆ ಮಾಡಿ.
ನಿಮ್ಮ ಸ್ಥಳೀಯ ಆರೋಗ್ಯ ಪ್ರಾಧಿಕಾರದ ನಿರ್ದೇಶನಗಳನ್ನು ಅನುಸರಿಸಿ.