ಬಾಲೀವುಡ್ ನಟರಾದ ರಿಷಿ ಕಪೂರ್ ಮತ್ತು ಇರ್ಫಾನ್ ಖಾನ್ ಇನ್ನಿಲ್ಲ

ಬಾಲೀವುಡ್ ನಟರಾದ ರಿಷಿ ಕಪೂರ್ ಮತ್ತು ಇರ್ಫಾನ್ ಖಾನ್ ಇನ್ನಿಲ್ಲ. ಕೊಲೊನ್ ಇನ್‍ಫೆಕ್ಷನ್‍ನಿಂದಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇರ್ಫಾನ್ ಖಾನ್ (53) ಚಿಕಿತ್ಸೆ ಫಲಿಸದೆ ಬುಧುವಾರ ಮೃತಪಟ್ಟಿದ್ದಾರೆ. ಶನಿವಾರವಷ್ಟೇ ಅವರ ತಾಯಿ ತೀರಿಕೊಂಡಿದ್ದರು. ಆದರೆ ಲಾಕ್‍ಡೌನ್ ಹಿನ್ನೆಲೆ ಇರ್ಫಾನ್ ಖಾನ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಹೋಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದರು.

ಹಿರಿಯ ಬಾಲೀವುಡ್ ನಟ ರಿಷಿ ಕಪೂರ್ ​ ಅವರು ಗುರುವಾರ ಮುಂಜಾನೆ ಮುಂಬೈನಲ್ಲಿ ಮೃತಪಟ್ಟಿದ್ದಾರೆ. 67 ವರ್ಷದ ರಿಷಿ ಕಪೂರ್​ಗೆ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಬುಧವಾರ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. “ರಿಷಿ​ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ,” ಎಂದು ರಣಧೀರ್​ ಕಪೂರ್​ ತಿಳಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Close